Mysore
31
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ.

ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಮಣಿಪುರ ಮೂಲದ ಯುವತಿ ಹನ್ನಾ ಇನಕಾ ಎಂದು ಗುರುತಿಸಲಾಗಿದೆ.

ಯುವತಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಆಕೆಗೆ ಡಿಕ್ಕಿ ಹೊಡೆದಿದೆ. ದುರದೃಷ್ಟವಶಾತ್‌ ಆಕೆ ಕೆಳಗೆ ಬಿದ್ದಿದ್ದು, ಬಸ್ಸಿನ ಚಕ್ರ ಆಕೆಯ ತಲೆಯ ಮೇಲೆ ಹರಿದಿದ್ದರಿದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಹನ್ನಾ ಇನಕಾ ಮಣಿಪುರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವನೋಪಾಯಕ್ಕೋಸ್ಕರ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡಿದ್ದ ಯುವತಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

 

Tags:
error: Content is protected !!