Mysore
26
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು-ಬೆಂಗಳೂರು ರಸ್ತೆಯ ಹಳೆ ಕೆಸರೆಯ ಗೋದಾಮುಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಒಂದರಿಂದ ಒಂದರಂತೆ ನಾಲ್ಕು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಳೆಯ ವಸ್ತುಗಳನ್ನಿಟ್ಟಿದ್ದ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!