Mysore
25
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.

ಜ್ಯೋತಿ ಎಂಬುವವರೇ ಮೃತಪಟ್ಟ ದುರ್ದೈವಿ. ಜ್ಯೋತಿ ಮನೆ ಮುಂದೆ ಕಸ ಗುಡಿಸುತ್ತಿದ್ದಾಗ ಮಾಂಗಲ್ಯ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸರಗಳವು ಮಾಡುವಾಗ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕಳ್ಳರನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.

Tags:
error: Content is protected !!