Mysore
29
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಮೈಸೂರಿನಲ್ಲಿ ಫೆಬ್ರವರಿ.14ರಂದು ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು, ಫೆಬ್ರವರಿ.14ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾಯಜ್ಞ ನಡೆಯಲಿದೆ. ಅಂದು ದೇಶದ ವಿವಿಧ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. 2016ರ ಬಳಿಕ ಸಾಂಸ್ಕೃತಿಕ ನಗರಿಯಲ್ಲಿ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಸುಲಲಿತ ಕನ್ನಡದಲ್ಲೇ ಕನ್ನಡ ಹನುಮಾನ್ ಚಾಲೀಸಾ ಪಾರಾಯಣ ಮಾಡಲಾಗುತ್ತದೆ ಎಂದು ಹೇಳಿದರು.

ಇನ್ನು ಫೆಬ್ರವರಿ.14 ಹಾಗೂ 15ರಂದು ನಡೆಯುವ ಕಾರ್ಯಕ್ರಮದಲ್ಲಿ ಮೊದಲ ದಿನ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಎರಡನೇ ದಿನದ ಕಾರ್ಯಕ್ರಮದಲ್ಲಿ ಶಿವರಾತ್ರಿ ಮಹಾ ಜಾಗರಣೆ, ಗಿರಿಜಾ ಕಲ್ಯಾಣ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡರು.

 

Tags:
error: Content is protected !!