Mysore
26
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ ಸುಮಾರು 104 ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದು, ಮಂಗಳವಾರ ವಾರಿಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು.

ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಸಿಇಐಆರ್ ಪೋರ್ಟಲ್ ಮೂಲಕ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಅಂದಾಜು 11 ಲಕ್ಷ ಮೌಲ್ಯದ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 2021, 2022 ಸೇರಿದಂತೆ 2025ರಲ್ಲಿ ಹೆಚ್ಚಾಗಿ ಕಳೆದಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ. ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಕೇರಳ ರಾಜ್ಯದಿಂದಲೂ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಕೊಂಡಲ್ಲಿ ಸಮೀಪದ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಬಹುದು. ಅದಕ್ಕಿಂತಲೂ ಉತ್ತಮ ಸಿಇಐಆರ್ ಪೋರ್ಟಲ್. ಕಳೆದುಹೋಗಿರುವ ಮೊಬೈಲ್‌ಗಳ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಹಾಕಿದ್ದರೆ ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.

ಕಳೆದ ಒಂದು ತಿಂಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸುವುದಾಗಿ ಮಾಹಿತಿ ನೀಡಿದರು.

ಸೈಬರ್ ಕ್ರೈಂ ಡಿವೈಎಸ್‌ಪಿ ತಳವಾರ, ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕರಾದ ಮೇದಪ್ಪ, ರಾಜು, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

 

Tags:
error: Content is protected !!