Mysore
24
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ ಚಿತ್ರದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.

ಚಿತ್ರದ ಕೆಲವು ದೃಶ್ಯಗಳು ಕ್ರೈಸ್ತ ಧರ್ಮಕ್ಕೆ ಮತ್ತು ದೇವದೂತರಿಗೆ ಅಪಮಾನ ಮಾಡುವಂತಿದೆ ಎಂದು ಆರೋಪಿಸಿ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಈಗ ಕಾನೂನು ಹೋರಾಟಕ್ಕೆ ಇಳಿದಿದೆ.

ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್‌ ಕುಮಾರ್‌ ಅವರು ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ ಸಚಿವರು, ಸೆನ್ಸಾರ್‌ ಬೋರ್ಡ್‌ ಮತ್ತು ಫಿಲ್ಮ್‌ ಚೇಂಬರ್‌ ಸೇರಿದಂತೆ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಚಿತ್ರದ ದೃಶ್ಯಗಳಲ್ಲಿ ಕ್ರೈಸ್ತ ಧರ್ಮದ ಪವಿತ್ರ ದೇವದೂತ ಸಂತ ಮಿಕಯೇಲ್‌ ಅವರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೇವದೂತರ ಪ್ರತಿಮೆ ಅಥವಾ ಚಿತ್ರಗಳ ಮುಂದೆ ಅಶ್ಲೀಲವಾಗಿ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಇದು ಕ್ರೈಸ್ತ ಸಮುದಾಯಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

 

 

Tags:
error: Content is protected !!