Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ.

ಶಿವರಾತ್ರಿ ಬಳಿಕ ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ. ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನಿಂದ ಭಾರೀ ಸೆಕೆ ಶುರುವಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲದಿದ್ದರೂ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದ್ದು, ತಂಪು ಪಾನೀಯಗಳನ್ನು ಉಪಯೋಗಿಸಬೇಕು ಎಂದು ಸಲಹೆ ನೀಡಿದೆ. ಜೊತೆಗೆ ಚರ್ಮದ ಬಗ್ಗೆ ನಿಗಾ ಇಡುವಂತೆ ಸೂಚಿಸಿದೆ.

Tags:
error: Content is protected !!