Mysore
27
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು.

ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕೋರ್ಟ್‌ಗಳಿಗೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕುತ್ತಿದ್ದಾರೆ.

ಮಡಿಕೇರಿ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಸಂದೇಶ ರವಾನಿಸಿದ್ದಾಎ. ನ್ಯಾಯಾಲಯದಲ್ಲಿ ಬಾಂಬ್‌ ಇಡಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್‌ ಪತ್ತೆ ದಳ, ಶ್ವಾನದಳ, ಬಾಂಬ್‌ ನಿಷ್ಕ್ರಿಯ ದಳದಿಂದ ಕೋರ್ಟ್‌ನಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತಿದೆ.

 

Tags:
error: Content is protected !!