Mysore
32
scattered clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ.

ತಮ್ಮ ಮಗಳ ವಿದ್ಯಾಭ್ಯಾಸದ ಕಾರಣ ನೀಡಿ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿದೆ.

ಪವಿತ್ರಾ ಗೌಡ ಅವರು ತಮ್ಮ ಮಗಳ ಪರೀಕ್ಷೆ ಇರುವ ಕಾರಣ ಕೆಲವು ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಪ್ರಾಸಿಕ್ಯೂಷನ್‌ ಪರ ವಕೀಲರು ಈ ಅರ್ಜಿಯನ್ನು ಬಲವಾಗಿ ವಿರೋಧಿಸಿದ್ದರು. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ವಾದಿಸಿದ್ದರು.

 

Tags:
error: Content is protected !!