Mysore
28
few clouds

Social Media

ಶುಕ್ರವಾರ, 01 ಮೇ 2026
Light
Dark

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ ವಿಭಾಗದ ಎಡಿಜಿಪಿ ಪಿ.ಹರಿಶೇಖರನ್, ನಗರ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಮೈಸೂರಿನಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಮಾಹಿತಿಯೊಂದಿಗೆ ಅಪರಾಧ ಪ್ರಕರಣಗಳ ಪತ್ತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಕಳೆದ ಮೂರು ವರ್ಷಗಳಲ್ಲಿ ಪ್ರತಿಯೊಂದು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿರುವ ಅಪರಾಧ ಕೃತ್ಯಗಳು, ಎಷ್ಟು ಪ್ರಕರಣಗಳು ಪತ್ತೆಯಾಗಿದೆ ಎಂಬ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೀಡಿದರು.
ಈ ವೇಳೆ ಮೈಸೂರು ನಗರದಲ್ಲಿ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟೆಚ್ಚರ ವಹಿಸಬೇಕು ಎಂದು ಎಡಿಜಿಪಿ ಸೂಚನೆ ನೀಡಿದರು.

ರಾತ್ರಿ ವೇಳೆ ಗಸ್ತು ವ್ಯವಸ್ಥೆ ಹೆಚ್ಚಳ ಮಾಡುವುದರೊಂದಿಗೆ ಅಗತ್ಯವಿರುವ ಕಡೆ ಹೆಚ್ಚುವರಿಯಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಹಳೆಯ ಅಪರಾಧಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು ಎಂದು ಸೂಚಿಸಿದರು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಕೆ.ಎಸ್.ಸುಂದರರಾಜ್ ಸೇರಿದಂತೆ ಕಮಿಷನರೇಟ್‌ನ ಎಲ್ಲಾ ವಿಭಾಗದ ಎಸಿಪಿಗಳು ಮತ್ತು ಇನ್‌ಸ್ಪೆಕ್ಟರ್‌ಗಳು ಸಭೆಯಲ್ಲಿ ಹಾಜರಿದ್ದರು.

Tags:
error: Content is protected !!