Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ಹುಲಿ ಬಲಿಯಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಉರುಳು ಹಾಕಿದವರ ಹಿಂದೆ ಬಿದ್ದಿದ್ದು, ಸತತ ವಿಚಾರಣೆಯಲ್ಲಿ ತೊಡಗಿದೆ. ಬೇರೆ ಪ್ರಾಣಿಗೆ ಹಾಕಿದ್ದ ಉರುಳಿಗೆ ಹುಲಿ ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಹುಲಿಯ ಮೃತದೇಹ ಪತ್ತೆಯಾದ ತಕ್ಷಣವೇ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಆದರೆ ಹುಲಿಯ ಕೊರಳಿಗೆ ಸ್ಕೂಟರ್‌ ಕ್ಲಚ್‌ ವೈರ್‌ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವುದು ಅಧಿಕಾರಿಗಳಿಗೆ ಗೊತ್ತಾಗಿದೆ.

ಜಲಾಶಯಕ್ಕೆ ಹುಲಿ ನೀರು ಕುಡಿಯಲು ಹೋದ ವೇಳೆ ಬದುಕಿತ್ತು. ನೀರಿಗೆ ಬಿದ್ದು ಸಾವನ್ನಪ್ಪಿದೆ ಎಂದು ಕೂಡ ಪಶುವೈದ್ಯರು ತಿಳಿಸಿದ್ದಾರೆ. ನಿರಂತರವಾಗಿ ಉರುಳು ಕತ್ತಿಗೆ ಸುತ್ತಿಕೊಂಡಿದ್ದರಿಂದ ಉಸಿರಾಡಲು ಆಗದೇ ಹುಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Tags:
error: Content is protected !!