Mysore
25
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಂದರೆ ಪುತ್ರಿ ರಶ್ಮಿ ರಾಜಣ್ಣರನ್ನೇ ನಿಲ್ಲಿಸುತ್ತೇನೆ ಎಂದರು.

ಇನ್ನು ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಅಂದುಕೊಂಡ್ರೆ ಅದೆಲ್ಲಾ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ. ಬಜೆಟ್‌ ಮಂಡಿಸುತ್ತಿದ್ದಾರೆ. ಅಲ್ಲಿಗೆ ಎಲ್ಲವೂ ಯಥಾಸ್ಥಿತಿಯಲ್ಲಿರುತ್ತದೆ ಅಂತಲೇ ಅರ್ಥ ಎಂದು ಹೇಳಿದರು.

Tags:
error: Content is protected !!