Mysore
30
few clouds

Social Media

ಗುರುವಾರ, 16 ಏಪ್ರಿಲ 2026
Light
Dark

ಸ್ಕೂಟಿ-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್‌ ಬಳಿ ಸ್ಕೂಟಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.

ರಮೇಶ್‌ ಹಾಗೂ ಪುರುಷೋತ್ತಮ್‌ ಎಂಬುವವರೇ ಮೃತ ಯುವಕರಾಗಿದ್ದಾರೆ.

ರಮೇಶ್‌ ಹಾಗೂ ಕಿರಣ್‌ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಪುರುಷೋತ್ತಮ್‌ ಬೈಕ್‌ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ರಮೇಶ್‌ ಸ್ಥಳದಲ್ಲಿ ಮೃತಪಟ್ಟರೆ, ಪುರುಷೋತ್ತಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಈ ಸಂಬಂಧ ಹಿರಿಸಾವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!