Mysore
28
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ ಪರಿಣಾಮಿಪುರ ಗ್ರಾಮದಲ್ಲಿ ನಡೆದಿದೆ.

ಪರಿಣಾಮಿಪುರ ಗ್ರಾಮದ ನಿವಾಸಿಯಾದ ಗುರುಮಲ್ಲಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಗುರುಮಲ್ಲಪ್ಪ ಅವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಒಂಟಿ ಸಲಗ ಏಕಾಏಕಿ ದಾಳಿ ಮಾಡಿ ತುಳಿದು ಸಾಯಿಸಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ವಲಯ ಅರಣ್ಯಾಧಿಕಾರಿ ಉಮೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 

Tags:
error: Content is protected !!