Mysore
30
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಧಾನಸೌಧಕ್ಕೆ ಬರೆದಿರುವ ಪತ್ರ ವೈರಲ್‌ ಆಗಿದೆ.

ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ ಇಲಾಖೆ ಇವರಿಗೆ ಸರ್ಕಾರ್‌ ಅಧೀನ ಕಾರ್ಯದರ್ಶಿ ಬರೆದಿರುವ ಪತ್ರವು ಮಾಧ್ಯಮದವರು ವಿಧಾನಸೌಧ ಕಟ್ಟಡದಲಲಿ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ನಿರ್ದೇಶನ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಭೈಟ್‌, ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಹಾಗೂ ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಸಿಎಂ, ಡಿಸಿಎಂ, ಸಚಿವರು, ಗಣ್ಯ ವ್ಯಕ್ತಿಗಳಿಂದ ಭೈಟ್‌ ತೆಗೆದುಕೊಳ್ಳಲು ಹಿಂಬಾಲಿಸದಂತೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುವಂತೆ ನಿರ್ದೇಶನ ನೀಡಲಾಗಿದೆ.

 

 

Tags:
error: Content is protected !!