Mysore
29
overcast clouds

Social Media

ಬುಧವಾರ, 24 ಜೂನ್ 2026
Light
Dark

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ.

27 ವರ್ಷ ಪುನೀತ್ ಎಂಬಾತನೇ ಮೃತ ದುರ್ದೈವಿ. ಪುನೀತ್‌ ಕಳೆದ ಆರು ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಎಂದಿನಂತೆಯೇ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದ. ರಾತ್ರಿ ಪುನೀತ್‌ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಬುಧವಾರ ಮಧ್ಯಾಹ್ನದ ವೇಳೆ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಪುನೀತ್‌ ಮೃತದೇಹ ಪತ್ತೆಯಾಗಿದೆ.

ಪುನೀತ್‌ನದ್ದು ಸಹಜ ಸಾವಲ್ಲ. ಕೊಲೆ ಎಂದು ಆರೋಪಿಸಿರುವ ಕುಟುಂಬಸ್ಥರು ಹಾಗೂ ಸ್ನೇಹಿತರು, ಕಾರ್ಖಾನೆ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!