Mysore
30
overcast clouds

Social Media

ಭಾನುವಾರ, 03 ಮೇ 2026
Light
Dark

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು ಶಾಲಿನಿ ರಜನೀಶ್‌ ಕೋಟ್ಯಾಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಡಾ ಮಾಜಿ ಆಯುಕ್ತ ನಟೇಶ್‌ ಅವರಿಂದ ಶಾಲಿನಿ ರಜನೀಶ್‌ ಲಂಚ ಪಡೆದು ಅವರಿಗೆ ಮುಂಬಡ್ತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್‌ ಅವರಿಂದ 1.60 ಕೋಟಿ ರೂಪಾಯಿ ಲಂಚವನ್ನು ಶಾಲಿನಿ ರಜನೀಶ್‌ ಪಡೆದುಕೊಂಡಿದ್ದಾರೆ. ಲಂಚದ ಹಣವನ್ನು ಕಾರಿನಲ್ಲಿ ತರಿಸಿಕೊಳ್ಳಲಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

 

Tags:
error: Content is protected !!