Mysore
28
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಓದುಗರ ಪತ್ರ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಹಾಗೂ ಚರಂಡಿಗೆ ಕಸ ಹಾಕದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ.

-ಚಂದ್ರಿಕಾ, ದ್ವಿತೀಯ ಬಿ.ಎ., ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

Tags:
error: Content is protected !!