Mysore
24
scattered clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶರದ್‌ ಪವಾರ್‌ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ.9ರಂದು ಎದೆ ಸೋಂಕಿನ ನಂತರ ಅದೇ ರೂಬಿ ಹಾಲ್‌ ಚಿಕಿತ್ಸಾಲಯಕ್ಕೆ ದಾಖಲಾಗಿ ಫೆಬ್ರವರಿ.14ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು.

ಸದ್ಯ ಶರದ್‌ ಪವಾರ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿರುತ್ತಾರೆ. ನಂತರ ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮುಖ್ಯ ಹೃದ್ರೋಗ ತಜ್ಞ ಮತ್ತು ಆಸ್ಪತ್ರೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ಟ್ರಸ್ಟಿ ಡಾ.ಪುರ್ವೇಜ್‌ ಗ್ರಾಂಟ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!