Mysore
28
scattered clouds

Social Media

ಸೋಮವಾರ, 22 ಜೂನ್ 2026
Light
Dark

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

DK Shivakumar

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಸಾರ್ವಜನಿಕವಾಗಿ ನೇರ ಸಂದೇಶ ರವಾನಿಸಿದ್ದಾರೆ.

ಸಿಎಂ ಸ್ಥಾನ ಬದಲಾವಣೆ ಕುರಿತು ಡಿ.ಕೆ.ಶಿವಕುಮಾರ್ ಫೆ.26ಕ್ಕೆ ದಿಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದರು. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ಇಕ್ಬಾಲ್ ಹುಸೇಸ್ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯರು. ಎಲ್ಲಾ ಹುಸೇನ್‌ಗಳಿಗೂ ಹೇಳುತ್ತಿದ್ದೇನೆ, ನನ್ನ ಪರ ಮಾತನಾಡುತ್ತಿರುವವರು ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆಯದು. ಆಗ ನನಗೆ ಒಳ್ಳೆಯದಾಗುತ್ತದೆ’ ಎಂದು ಹೇಳಿದ್ದಾರೆ.

ಶಾಸಕ ಇಕ್ಬಾಲ್ ಹುಸೇನ್, ರವಿ ಗಣಿಗ, ಶಿವಗಂಗಾ ಬಸವರಾಜು, ಕುಣಿಗಲ್ ರಂಗನಾಥ್ ಅವರು ಬಾಯಿ ಮುಚ್ಚಿಕೊಂಡಿರಬೇಕು. ಅವರು ಮೌನವಾಗಿದ್ದರೆ ತಮಗೆ ಒಳ್ಳೆಯದಾಗುತ್ತದೆ ಎಂದು ಖಡಕ್ ಸಂದೇಶ ರವಾನಿಸಿದರು.

 

 

Tags:
error: Content is protected !!