Mysore
28
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ.

ನಟ ದರ್ಶನ್‌ ಅವರ ಗನ್‌ ಲೈಸೆನ್ಸ್‌ ಅಮಾನತುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರಿಗೆ ಜಾಮೀನು ಸಿಕ್ಕ ಬಳಿಕ. ಪೊಲೀಸರು ಅವರ ಗನ್‌ ಲೈಸೆನ್ಸ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ದರ್ಶನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಪೊಲೀಸರ ಅಮಾನತು ಆದೇಶಕ್ಕೆ ತಡೆ ನೀಡಿರುವ ಪೀಠವು ದರ್ಶನ್‌ ಅವರಿಗೆ ಸಮಾಧಾನ ತಂದಿದೆ.

ನಟ ದರ್ಶನ್‌ ಅವರು ಕಳೆದ 2008ರಿಂದಲೂ ಅಧಿಕೃತವಾಗಿ ಲೈಸೆನ್ಸ್‌ ಹೊಂದಿದ್ದರು. ಯಾವುದೇ ಕಾನೂನುಬಾಹಿರ ಚಟುವಟಿಕೆಗೇ ಶಸ್ತ್ರಾಸ್ತ್ರ ಬಳಸದಿದ್ದರೂ ಅಮಾನತು ಮಾಡುವುದು ಸರಿಯಲ್ಲ ಎಂಬ ವಾದವನ್ನು ಆಲಿಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

Tags:
error: Content is protected !!