Mysore
32
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

Kodagu rain

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಬೀದರ್‌, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Tags:
error: Content is protected !!