Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ತುರ್ತು ಸಭೆ ನಡೆಸಿದ ಸಚಿವ ಈಶ್ವರ್‌ ಖಂಡ್ರೆ ಅವರು, ವನ್ಯಜೀವಿ-ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರು ಹಾಗೂ ಗ್ರಾಮಗಳ ಜಮೀನು ಮಾಲೀಕರ ವಾಟ್ಸಪ್‌ ಗ್ರೂಪ್‌ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚನೆ ನೀಡಿದರು.

ವನ್ಯಜೀವಿಗಳ ಸೆರೆ ಕಾರ್ಯಾಚರಣೆಗೆ ಅತ್ಯಾಧುನಿಕ ಸಲಕರಣೆಗಳಾದ ಥರ್ಮಲ್‌ ಡ್ರೋನ್‌ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.

 

 

Tags:
error: Content is protected !!