Mysore
28
haze

Social Media

ಸೋಮವಾರ, 02 ಮಾರ್ಚ್ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.

ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯಪುರ, ಬೀದರ್‌, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ಕೂಡ ಕೊಡಗು ಮತ್ತು ವಿಜಯಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

 

Tags:
error: Content is protected !!