Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಓದುಗರ ಪತ್ರ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ ದೇಣಿಗೆಯಿಂದ ದೇವಾಲಯಗಳ ಜೀರ್ಣೋದ್ಧಾರ, ಹಬ್ಬ, ಜಾತ್ರೆ ಮೊದಲಾದ ಸಂದರ್ಭಗಳಲ್ಲಿ ಅನ್ನದಾನ ಮಾಡುತ್ತಿರುವುದು ಶ್ಲಾಘನೀಯ.

ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ಕೇವಲ ಅದ್ಧೂರಿ ಅಲಂಕಾರ ಮತ್ತು ಉತ್ಸವಗಳಿಗೆ ಮಾತ್ರ ಸೀಮಿತವಾಗಬಾರದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾಗಬೇಕು, ಉದಯೋನ್ಮುಖ ಕ್ರೀಡಾಪಟುಗಳಿಗೆ ಬೆಂಬಲ ನೀಡಬೇಕು ಹಾಗೂ ಬಡ ರೋಗಿಗಳ ಚಿಕಿತ್ಸೆಗಾಗಿ ಒಂದು ‘ಆರೋಗ್ಯ ನಿಧಿ’ಯಾಗಿ ರೂಪುಗೊಳ್ಳಬೇಕು. ‘ಜನಸೇವೆಯೇ ಜನಾರ್ಧನನ ಸೇವೆ’ ಎನ್ನುವಂತೆ, ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗುವ ಹಣ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಬೆಳಕಾದಾಗ ದೇವರಿಗೂ ಪ್ರೀತಿಯಾಗುತ್ತದೆ. ಈ ನಿಟ್ಟಿನಲ್ಲಿ ಮೈಸೂರು ಭಾಗದ ದೇವಾಲಯಗಳ ಎಲ್ಲಾ ಧರ್ಮದರ್ಶಿಗಳು ಮತ್ತು ಪದಾಧಿಕಾರಿಗಳು ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

 

Tags:
error: Content is protected !!