Mysore
24
clear sky

Social Media

ಭಾನುವಾರ, 26 ಏಪ್ರಿಲ 2026
Light
Dark

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು ಬೆಳಿಗ್ಗೆ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಸಂಪ್ರದಾಯದಂತೆ ಇವರ ವಿವಾಹ ಮಹೋತ್ಸವ ಜರುಗಿತು.

ಅತ್ಯಂತ ಆಪ್ತರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವೇದ ಮಂತ್ರ ಘೋಷಗಳು ಹಾಗೂ ಮಂಗಳ ವಾದ್ಯಗಳ ನಡುವೆ ವಿಜಯ್‌, ರಶ್ಮಿಕಾ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದರು. ಹಿಂದೂ ಸಂಪ್ರದಾಯದಂತೆ ನಡೆದ ಈ ಮದುವೆಯಲ್ಲಿ ವಿಜಯ್‌ ಹಾಗೂ ರಶ್ಮಿಕಾ ನೋಡಲು ಬಹಳ ಸುಂದರವಾಗಿ ಕಾಣುತ್ತಿದ್ದರು.

ಮಾಹಿತಿ ಪ್ರಕಾರ ಇಂದು ಬೆಳಿಗ್ಗೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದು, ಸಂಜೆ 4.30 ಗಂಟೆಗೆ ರಶ್ಮಿಕಾ ಅವರ ಮೂಲದ ಕೊಡವ ಸಂಪ್ರದಾಯದ ಪ್ರಕಾರ ವಿವಾಹದ ವಿಧಿವಿಧಾನಗಳು ನಡೆಯಲಿದೆ.

Tags:
error: Content is protected !!