Mysore
20
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ: ಕೇಂದ್ರ ಸಚಿವರಿಗೆ ಪತ್ರ ಬರೆದ ಶ್ರೀರಾಮುಲು

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮಾಜಿ ಸಚಿವ ಶ್ರೀರಾಮುಲು ಪತ್ರ ಬರೆದು ಮನವಿ ಮಾಡಿದ್ದಾರೆ.

ಫೆಬ್ರವರಿ.19ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದ ವೇಳೆ ಕಿಡಿಗೇಡಿಗಳು ಕಲ್ಲು ಚಪ್ಪಲಿ ತೂರಾಟ ನಡೆಸಿದ್ದರು. ಈ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ. ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆಯಿದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್‌ಐಎ ತನಿಖೆ ಅಗತ್ಯ ಎಂದು ಉಲ್ಲೇಖಿಸಿದ್ದಾರೆ.

 

Tags:
error: Content is protected !!