Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಎಂದೇ ಹೆಸರಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸುವ, ಅವರ ಕತ್ತು ಹಿಸುಕಿ ಹಿಂಸಿಸಿ ವಿಕೃತವಾಗಿ ಆನಂದಪಡುವ ವಿಲಕ್ಷಣ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಅಲ್ಲದೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ಠಾಣೆಯಲ್ಲಿ ಪೋಕ್ಸೋ ಕೇಸ್‌ ಕೂಡ ದಾಖಲಾಗಿದೆ.

ಬಂಧನ ಭೀತಿಯಲ್ಲಿರುವ ಮುತ್ಯಾ, ತಲೆಮರೆಸಿಕೊಂಡಿದ್ದು, ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ತಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ಬೇರೆ ಬೇರೆ ಮಠಗಳಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ವಿಡಿಯೋ ದೃಶ್ಯ ತಪ್ಪಾಗಿ ಭಾವಿಸಲಾಗಿದೆ. ತಾನು ಯಾವುದೇ ತಪ್ಪು ಮಾಡಿಲ್ಲ. ಅಸಭ್ಯವಾಗಿ ವರ್ತಿಸುವಂತದ್ದು ಅದರಲ್ಲಿ ಏನೂ ಇಲ್ಲ ಎಂದು ಹೇಳಿದ್ದಾರೆ.

 

Tags:
error: Content is protected !!