Mysore
33
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕಲಬುರ್ಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮಲ್ಲಿಕಾರ್ಜುನ ಮುತ್ಯಾ, ಪೋಷಕರಿಂದ ದೂರು ಬಂದಿಲ್ಲ. ಸಂತ್ರಸ್ತೆಯ ಪೋಷಕರು ಯಾವುದೇ ರೀತಿಯ ದೂರು ನೀಡಿಲ್ಲ. ಆದರೂ ಪೊಲೀಸರು ಸ್ವಯಂಪ್ರೇರಿತವಾಗಿ ಅಥವಾ ಅನ್ಯ ಮೂಲಗಳಿಂದ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಲ್ಲಿ ಪೋಷಕರೇ ದೂರು ನೀಡದಿದ್ದ ಮೇಲೆ ಈ ಪ್ರಕರಣಕ್ಕೆ ಕಾನೂನಿನ ಮಾನ್ಯತೆ ಇರುವುದಿಲ್ಲ. ಆದ್ದರಿಂದ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಗೊಳಿಸಬೇಕು ಎಂದು ಮಲ್ಲಿಕಾರ್ಜುನ ಮುತ್ತಾ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

Tags:
error: Content is protected !!