Mysore
22
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ಭವನ ಗುರಿಯಾಗಿಸಿ ಇಸ್ರೇಲ್‌ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ.

ಇರಾನ್‌ ರಾಜಧಾನಿ ಟೆಹರಾನ್‌ ನಗರದ ಮೇಲೆ ಇಸ್ರೇಲ್‌ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಟೆಹರಾನ್‌ನ ಹಲವೆಡೆ ಭಾರೀ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿದೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್‌ ಜನತೆ ತತ್ತರಿಸಿ ಹೋಗಿದ್ದಾರೆ.

ಇರಾನ್‌ ಸೇನೆ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್‌ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇರಾನ್‌ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್‌ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಿದೆ.

Tags:
error: Content is protected !!