Mysore
23
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ.

ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್‌ ಆಧಾರದ ಮೇಲೆ ಜೆ ಅಂಡ್‌ ಕೆ ಚಾಂಪಿಯನ್‌ ಆಗಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಜಮ್ಮು ಕಾಶ್ಮೀರ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ನಂತರ ಮೊದಲ ಇನ್ನಿಂಗ್ಸ್‌ ಆಡಲು ಕಣಕ್ಕಿಳಿದ ಕರ್ನಾಟಕ ಕೇವಲ 293 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಪಂದ್ಯ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಜಮ್ಮು-ಕಾಶ್ಮೀರದ ಆಟಗಾರರು ಕುಣಿದು ಕುಪ್ಪಳಿಸಿದರು. ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು.

Tags:
error: Content is protected !!