Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ.

ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್‌ ನಡೆಯುತ್ತಿದೆ.

ಸುಗ್ರೀವ, ಕಂಜನ್‌, ಧನಂಜಯ, ಹರ್ಷ, ಈಶ್ವರ, ಅಯ್ಯಪ್ಪ ಆನೆಗಳಿಂದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದ್ದು, ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆ ಆರಂಭಿಸಿದೆ.

ಡ್ರೋನ್‌ ಮೂಲಕ ಪುಂಡಾನೆಗಳನ್ನು ಪತ್ತೆಹಚ್ಚಿ ಬಳಿಕ ಅರವಳಿಕೆ ಮದ್ದು ನೀಡಿ ಕಾಡಾನೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ.

Tags:
error: Content is protected !!