Mysore
25
light rain

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ ಮಡಿಕೇರಿಯ ಸಂತ ಮೈಕಲ್ ಶಾಲೆಯ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕಳೆದ ಸಂಜೆ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಬಂದು ಇಳಿದು ಸ್ವಲ್ಪ ದೂರು ನಡೆಯುವಾಗ ಏಕಾಏಕಿ ಆನೆಯೊಂದು ದಾಳಿ ನಡೆಸಿದ್ದು, ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಯುವತಿಯ ಶವವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಈ ಸಂಬಂಧ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಟ್ಟತ್ತೂರಿನ ಸುತ್ತಮುತ್ತ ಆನೆಗಳು ಓಡಾಡುತ್ತಿದ್ದು, ಆನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!