Mysore
23
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ.

ಜಮ್ಮು-ಕಾಶ್ಮೀರದಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ ಗಮನಿಸಿದ ಸಿಎಂ ಓಮರ್‌ ಅಬ್ದುಲ್ಲಾ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಶ್ರೀನಗರದ ವಿವಿಧ ಭಾಗಗಳಲ್ಲಿ ಮಹಿಳೆಯರು ಸೇರಿದಂತೆ ನೂರಾರು ಶಿಯಾ ಮುಸ್ಲಿಮರು ರಸ್ತೆಗಿಳಿದರು. ಎದೆ ಬಡಿದುಕೊಂಡು ಶೋಕಿಸುತ್ತಾ ಪ್ರತಿಭಟನಾಕಾರರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಅನೇಕರು ಕೆಂಪು ಮತ್ತು ಕಪ್ಪು ಬಣ್ಣದ ಧ್ವಜಗಳನ್ನು ಹಿಡಿದು ಅಮೇರಿಕಾ ಹಾಗೂ ಇಸ್ರೇಲ್‌ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

Tags:
error: Content is protected !!