Mysore
20
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದನ್ನು ಅವರನ್ನೇ ಕೇಳಬೇಕು. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚಾರ ಆರಂಭಿಸಿರುವುದು ದುರಂತ ಎಂದು ಹೇಳಿದರು.

ಇನ್ನು ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಮಾತನಾಡಿದ ಅವರು, ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ಎಂದು ಹೇಳಿದರು.

 

Tags:
error: Content is protected !!