Mysore
22
light rain

Social Media

ಶನಿವಾರ, 01 ಆಗಸ್ಟ್ 2026
Light
Dark

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

Trump Tariff

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌ ಸಂಗ್ರಹವಿದ್ದು, ಎಷ್ಟೇ ಸುದೀರ್ಘ ಕಾಲ ಯುದ್ಧ ನಡೆದರೂ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.

ಇಸ್ರೇಲ್-ಇರಾನ್‌ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಅಮೇರಿಕಾವು ಮಧ್ಯಮ ಮತ್ತು ಉನ್ನತ ಮಧ್ಯಮ ಶ್ರೇಣಿಯ ಶಸ್ತ್ರಾಸ್ತ್ರಗಳ ಅಕ್ಷಯ ಭಂಡಾರವನ್ನು ಹೊಂದಿದೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ.

ಇನ್ನು ಮಾಜಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉನ್ನತ ಮಟ್ಟದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ಗೆ ಕಳುಹಿಸುವ ಮೂಲಕ ಅಮೇರಿಕಾದ ದಾಸ್ತಾನನ್ನು ಖಾಲಿ ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ತಮ್ಮ ಮೊದಲ ಅವಧಿಯಲ್ಲಿ ಅಮೇರಿಕಾದ ಮಿಲಿಟರಿಯನ್ನು ತಾವು ಪುನರ್‌ ನಿರ್ಮಿಸಿದ್ದು, ದೇಶವು ಈಗ ಸಂಪೂರ್ಣ ಸಜ್ಜಾಗಿದೆ. ದೊಡ್ಡ ಮಟ್ಟದಲ್ಲಿ ಗೆಲ್ಲಲು ಸಿದ್ಧವಾಗಿದೆ ಎಂದು ಹೇಳಿದರು.

Tags:
error: Content is protected !!