Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ಪ್ರೆಸ್ಟೀಜ್‌ ಫೈನ್‌ ಬೇರಿ ಪಾರ್ಕ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ.

ಕೇರಳ ಮೂಲದ ಅಶ್ವಿನ್‌ ಹಾಗೂ ಮೊಬಿನಾ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಪೆಡ್ಲಿಂಗ್‌ ಅನ್ನೇ ವೃತ್ತಿಯನ್ನಾಗಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಾರ್ಯಾಚರಣೆ ವೇಲೆ ಭಾರೀ ಪ್ರಮಾಣದ ಎಲ್‌ಎಸ್‌ಡಿ, ಹೈಡ್ರೋ ಗಾಂಜಾ ಮತ್ತು ಚರಸ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 10 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

Tags:
error: Content is protected !!