Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ ಹುಲಿ ಓಡಾಡುತ್ತಿರುವುದರಿಂದ ಜನರು ಆತಂಕದಲ್ಲಿಯೇ ಜೀವನ ಕಳೆಯುತ್ತಿದ್ದು, ಆದಷ್ಟು ಬೇಗ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ.

ಕಳೆದ ಒಂದು ವಾರದಿಂದ ನಿರಂತರವಾಗಿ ಹುಲಿಯೊಂದು ಚಂಗಡಿ ಗ್ರಾಮದ ಮನೆಗಳ ಸಮೀಪವೇ ಓಡಾಡುತ್ತಿದೆ. ಮನೆಗಳಲ್ಲಿ ವಯಸ್ಸಾದವರು ವಯೋವೃದ್ಧರೆ ಇರುವುದರಿಂದ ರಾತ್ರಿ ವೇಳೆ ಹುಲಿ ದಾಳಿ ನಡೆಸಿದರೆ ಇದಕ್ಕೆ ಯಾರೋ ಹೊಣೆ, ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದ ಕೆಲವು ಮನೆಗಳಲ್ಲಿ ಶೌಚಾಲಯ ಇಲ್ಲದೆ ಇರುವುದರಿಂದ ಬಯಲಿನಲ್ಲಿ ಶೌಚಾಲಯಕ್ಕೆ ಹೋಗುತ್ತಾರೆ. ಇಂತಹ ವೇಳೆ ಹುಲಿ ದಾಳಿ ನಡೆಸಿ ಸರ್ಕಾರದಿಂದ ಪರಿಹಾರ ನೀಡಿದರೆ ಏನು ಪ್ರಯೋಜನ ಅದರ ಬದಲು ಹುಲಿ ಸೆರೆ ಹಿಡಿದು ಸ್ಥಳಾಂತರ ಮಾಡಿದರೆ ರೈತರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಿಲಿದೆ.

ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Tags:
error: Content is protected !!