Mysore
27
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಮ್ಮ ಶಾಸಕರು ಎಲ್ಲಾ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈಗ ಫೋನ್‌ ಕದ್ದಾಲಿಕೆ ಮಾಡುವ ಅವಶ್ಯಕತೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಎಚ್‌ಡಿಕೆ ಸಿಎಂ ಆಗಿದ್ದಾಗಲೂ ಫೋನ್‌ ಕದ್ದಾಲಿಕೆ ಆರೋಪ ಕೇಳಿಬಂದಿತ್ತು. ಸ್ವಾಮೀಜಿಯವರ ಫೋನ್‌ ಕದ್ದಾಲಿಕೆ ಎಂಬ ಆರೋಪವಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲೂ ಫೋನ್‌ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು ಎಂದು ತಿಳಿಸಿದರು.

 

Tags:
error: Content is protected !!