Mysore
20
clear sky

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯ ಬಜೆಟ್‌: ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್‌ಗಳಿಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇನ್ನು ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್‌ಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದರಿಂದ ಜನತೆಗೆ ತುಂಬಾ ಅನುಕೂಲವಾಗಲಿದೆ. ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಣೆ ಮಾಡಲಾಗಿದ್ದು, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿವಿಗೆ 25 ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

63 ತಾಲ್ಲೂಕುಗಳಲ್ಲಿ ಕುಪೋಷಿತ ಮಕ್ಕಳಿಗೆ ಪೌಷ್ಠಿಕ ಪುನಶ್ಚೇತನ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಂಡಿದ್ದು, ರಾಜ್ಯದ ಐದು ಕಡೆ ರೇಷ್ಮೆ ಪಾರ್ಕ್‌ ಸ್ಥಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

 

Tags:
error: Content is protected !!