Mysore
25
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

_B Y Vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು ದಾಖಲೆ ದಿನಗಳವರೆಗೆ ಸಿಎಂ ಆಗಿ ತಾವು ಪಡೆದ ಅನುಭವವನ್ನು ಸಂಪೂರ್ಣ ನೀರಿನಲ್ಲಿ ಹೋಮ ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿದ್ದರಾಮಯ್ಯ ಮಂಡಿಸಿದ 17ನೇ ಬಜೆಟ್‌ ಸಾಲದ ಸುಳಿಗೆ ಸಿಲುಕಿಸುತ್ತಿರುವ ಕರಾಳ ಅಧ್ಯಾಯವಾಗಿದೆ. ಇವರ ಪಂಚ ಗ್ಯಾರಂಟಿಗಳಿಗೆ ಪ್ರತ್ಯೇಕ ಅನುದಾನ ನಿಗದಿ ಮಾಡದೇ ಆಯಾಯ ಇಲಾಖೆಗಳ ಅನುದಾನವನ್ನೇ ಕಡಿತ ಮಾಡಿ ಪಂಚ ಗ್ಯಾರಂಟಿಗೆ ಜೋಡಿಸಲಾಗಿದೆ.

ಸಾರ್ವಜನಿಕ ಸಾಲ ಒಟ್ಟು 8.24 ಲಕ್ಷ ಕೋಟಿ ರೂಗೆ ಏರಿಸಿರುವುದು ಪ್ರತಿ ಕನ್ನಡಿಗನಿಗೆ ಈ ಕಾಂಗ್ರೆಸ್‌ ಸರ್ಕಾರ ನೀಡಿರುವ ಉಡುಗೊರೆ ಎಂದು ಟೀಕೆ ಮಾಡಿದ್ದಾರೆ.

 

Tags:
error: Content is protected !!