Mysore
27
scattered clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆದರಿಕೆ ಮತ್ತು ನಿಂದನೆ ಆರೋಪ ಸಂಬಂಧ ಕೇಸು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್‌ ಕುಮಾರ್‌ ದೂರು ನೀಡಿದ್ದಾರೆ. ಫೋನ್‌ ಕರೆಯ ಮೂಲಕ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.

ಡಾಗ್‌ ಸತೀಶ್‌ ಸ್ನೇಹ ಬಿಡಬೇಕೆಂದು ಬೆದರಿಕೆ ಹಾಕಿದ್ದಾರೆ. ಮೊಬೈಲ್‌ಗೆ ದೂರುದಾರರ ಕಾರಿನ ಫೋಟೋ ಕಳುಹಿಸಿ ಮೆಸೇಜ್‌ ಮೂಲಕ ಬೆದರಿಕೆ ಹಾಕಲಾಗಿದೆ.

ನಾನು ರಜತ್‌ ಕಾಲ್‌ ಮಾಡುತ್ತಿದ್ದೇನೆ. ವಾಪಸ್‌ ಕಾಲ್‌ ಮಾಡ್ತೀರಾ? ಇಲ್ಲ ನಾವೇ ಒಳಗೆ ನುಗ್ಗಬೇಕಾ ಎಂದು ಮೆಸೇಜ್‌ ಹಾಕಿದ್ದಾರೆ. ಕಾನ್ಫರೆನ್ಸ್‌ ಕಾಲ್‌ನಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಗಿರೀಶ್‌ ಕುಮಾರ್‌ ದೂರಿನ ಮೇರೆಗೆ ರಜತ್‌ ಮತ್ತು ಕಿರಣ್‌ ವಿರುದ್ಧ ದೂರು ದಾಖಲಿಸಲಾಗಿದೆ.

 

Tags:
error: Content is protected !!