Mysore
32
light rain

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭರತ್‌ ಹಾಗೂ ಮಿಥುನ್‌ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ.

ಸ್ನೇಹಿತರೊಂದಿಗೆ ಕಾಫಿ ತೋಟವೊಂದರ ಕೆರೆಯಲ್ಲಿ ಈಜಲು ಹೋಗಿದ್ದ ಭರತ್‌ ಹಾಗೂ ಮಿಥುನ್‌ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ವಿದ್ಯಾರ್ಥಿಗಳು ಕೆರೆಯಿಂದ ಮೇಲೆ ಬಂದು ಬಚಾವ್‌ ಆಗಿದ್ದಾರೆ.

ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!