Mysore
30
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್‌ ಬಳಿ ನಡೆದಿದೆ.

ಮೃತರನ್ನು ಸೈಯದ್‌ ಪಾಷಾ, ಯೂನಿಫ್‌ ಖಾನ್‌, ಅಜರ್‌ ಪಾಷ ಎಂದು ಗುರುತಿಸಲಾಗಿದೆ. ಫರಾಜ್‌ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಬೆಳಗಿನ ಜಾವ 3 ಗಂಟೆಯ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Tags:
error: Content is protected !!