Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸುವ ಶಿಷ್ಟಾಚಾರದಲ್ಲಿನ ಲೋಪಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್‌ ಮೋಹನ್‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಕಾರ್ಯಕ್ರಮದ ದೂರದ ಸ್ಥಳದ ಬಗ್ಗೆ ರಾಷ್ಟ್ರಪತಿ ಮುರ್ಮು ಅಸಮಾಧಾನ ವ್ಯಕ್ತಪಡಿಸಿದ ನಂತರ ಈ ಕ್ರಮವು ತೀವ್ರ ರಾಜಕೀಯ ಬಿರುಗಾಳಿಯನ್ನು ಹೆಚ್ಚಿಸಿದೆ.

ರಾಷ್ಟ್ರಪತಿಗಳನ್ನು ಸ್ವಾಗತಿಸಲು ಸಿಎಂ ಮಮತಾ ಬ್ಯಾನರ್ಜಿ ಬಾರದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಕೇಂದ್ರ ಸಚಿವರು ಇದನ್ನು ಪ್ರಜಾಪ್ರಭುತ್ವ ಮತ್ತು ಬುಡಕಟ್ಟು ಸಬಲೀಕರಣದ ಮೇಲಿನ ದಾಳಿ ಎಂದು ಖಂಡಿಸಿದ್ದಾರೆ.

Tags:
error: Content is protected !!