Mysore
30
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ನಂಜನಗೂಡು| ಕಸುವಿನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ನಾರಾಯಣಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು.

ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಶ್ರೀ ನಾರಾಯಣಸ್ವಾಮಿ ಭಕ್ತ ಮಂಡಳಿ, ಗ್ರಾಮಸ್ಥರು, ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.

ಈ ಸಂದರ್ಭದಲ್ಲಿ ನೂತನ ವಿಮಾನ ಗೋಪುರದ ಕುಂಭಾಭಿಷೇಕ, ಕಳಸಾರೋಹಣ, ಉತ್ಸವಗಳು ಹಾಗೂ ಧಾರ್ಮಿಕ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ನಡೆಯಿತು. ಜೀರ್ಣೋದ್ಧಾರದ ಪ್ರಯುಕ್ತ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆಲ್ಲರಿಗೂ ಅಚ್ಚುಕಟ್ಟಾದ ಪ್ರಸಾದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು.

Tags:
error: Content is protected !!