Mysore
22
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್‌, ಜೆದ್ದಾ, ದಮ್ಮಾಮ್‌, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ.

ಏರ್‌ಸ್ಪೇಸ್‌ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

 

Tags:
error: Content is protected !!