Mysore
28
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ.

ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್‌.ಜೈಶಂಕರ್‌ ಲೋಕಸಭೆಯಲ್ಲಿ ಪರಿಸ್ಥಿತಿ ಕುರಿತು ಸೋಮವಾರ ಮಾಹಿತಿ ನೀಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್‌ ಡಾ.ಎಸ್.‌ಜೈಶಂಕರ್‌ ಅವರನ್ನು ಭೇಟಿ ಮಾಡಿ, ಕನ್ನಡಿಗರ ರಕ್ಷಣೆಗಾಗಿ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಕೋಟಾ ಶ್ರೀನಿವಾಸ್‌ ಪೂಜಾರಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ.

 

Tags:
error: Content is protected !!