ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜುರವರು ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಆಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಹಾಗೂ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರರವರನ್ನು ದೇವಸ್ಥಾನದ ಪ್ರಮುಖರು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.
ದೇವರ ದರ್ಶನ ಪಡೆದ ನಂತರ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಅದೇ ರೀತಿ ಈ ಬಾರಿಯೂ ಶ್ರೀ ಬೆಟ್ಟಳ್ಳಿ ಮಾರಮ್ಮ ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ಧಾರ್ಮಿಕ ಪೂಜಾ ಕೈಂಕಾರ್ಯಗಳಲ್ಲಿ ಸಮಾನತೆ ಒದಗಿಸಬೇಕು. ಜಾತ್ರೆ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಯಾವುದೇ ಅಹಿತಕರ ಘಟನೆ ನಡೆದಂತೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಬ್ಬರಿಗೂ ಶ್ರೀ ಬೆಟ್ಟಳ್ಳಿ ಮಾರಮ್ಮ ಶುಭವನ್ನುಂಟುಮಾಡಲಿ ಎಂದು ಶುಭ ಕೋರಿದರು.
ಬುಧವಾರ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಮುಖ ಘಟ್ಟವಾಗಿರುವ ದೊಡ್ಡಬಾಯಿ ಬೀಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಂಗೇಗೌಡ ಮಾತನಾಡಿ ಈ ಬಾರಿ 86 ಜನರು ದೊಡ್ಡ ಬಾಯಿ ಬೀಗ ಹಾಕಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ 19 ಮಹಿಳಾ ಭಕ್ತಾದಿಗಳು ಸಹ 30 ಅಡಿ ಉದ್ದದ ಬಾಯಿ ಬೀಗ ಹಾಕಿಸಿಕೊಳ್ಳುತ್ತಿದ್ದಾರೆ. ಮೂರರಿಂದ ನಾಲ್ಕು ಸಾವಿರ ಭಕ್ತಾದಿಗಳು ಚಿಕ್ಕಬಾಯಿ ಬೀಗ ಹಾಕಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದೆ ವೇಳೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್‌ಗಳಾದ ಆನಂದ್ ಮೂರ್ತಿ ಚಿಕ್ಕರಾಜ್ ಶೆಟ್ಟಿ, ಜಗದೀಶ್ ಒಕ್ಕಲಿಗ ಸಮುದಾಯದ ಮುಖಂಡರಾದ ಲಿಂಗರಾಜುಗೌಡ, ವೆಂಕಟೇಗೌಡ, ಮಾದೇಶ್, ರಾಜುಗೌಡ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಗಿರೀಶ್, ಹರೀಶ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಜರಿದ್ದರು.





