Mysore
26
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ ಮೌಲ್ಯಮಾಪನದಲ್ಲಿ ಆಗುವ ಲೋಪ ದೋಷಗಳಿಂದಾಗಿ ಉತ್ತಮ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬರುತ್ತದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಕೆಲವು ವಿದ್ಯಾರ್ಥಿಗಳು ಮೊದಲ ಸ್ಥಾನ ಗಳಿಸಿದ ನಿದರ್ಶನಗಳಿವೆ. ಹಣದ ಕೊರತೆ ಮೊದಲಾದ ಕಾರಣಗಳಿಂದಾಗಿ ಎಲ್ಲ ವಿದ್ಯಾರ್ಥಿಗಳೂ ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಲು ಸಾಧ್ಯವಿಲ್ಲ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ ಅಽಕಾರಿಗಳು ಅನುಭವಿ ಹಾಗೂ ಜವಾಬ್ದಾರಿಯುತ ಮೌಲ್ಯ ಮಾಪಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

 -ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

 

 

Tags:
error: Content is protected !!